
ಮಳವಳ್ಳಿ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ…
- Crime
- October 17, 2022
- No Comment
- 151
ಮಳವಳ್ಳಿ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ…
ಮೈಸೂರು,ಅ17,Tv10 ಕನ್ನಡ
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನಲ್ಲಿ 10 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಘಟನೆ ಖಂಡಿಸಿ ಕರ್ನಾಟಕ ರಾಜದಯ ಮಾನವ ಹಕ್ಕುಗಳ ರಕ್ಷಣಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಯಿತು.ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಅಗ್ರಹಿಸಿದರು.ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಂದ ಆರೋಪಿ ಕಾಂತರಾಜ್ ಗೆ ಗಲ್ಲು ಶಿಕ್ಷೆ ವಿಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಸರ್ಕಾರ ಸೂಕ್ತ ಕಾನೂನು ಜಾರಿ ಮಾಡಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಸಂಘದ ರಾಜ್ಯಾದ್ಯಕ್ಷರಾದ ಸುಶೀಲ,ರಾಜ್ಯ ಪ್ರಧಾನ ಕಾರ್ಯದರ್ಶಿ ಪುಟ್ಟರಾಜು,ಭಾಗ್ಯಮ್ಮ,ಚಾಮರಾಜು,ಭಾಗ್ಯ ಸೇರಿದಂತೆ ಮತ್ತಿತರರು ಭಾಗವಹಿಸಿದ್ದು…