ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಿದ್ದ ಮಹಿಳೆ ಕಾರಿನಲ್ಲೇ ಸಾವು…
- CrimeMysore
- October 23, 2022
- No Comment
- 115
ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಿದ್ದ ಮಹಿಳೆ ಕಾರಿನಲ್ಲೇ ಸಾವು…
ಮೈಸೂರು,ಅ23,Tv10 ಕನ್ನಡ
ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಿದ್ದ ಮಹಿಳೆ ಮೈಸೂರಿಗೆ ಹಿಂದಿರುಗುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ ಘಟನೆ ನಡೆದಿದೆ.ಪಡುವಾರಹಳ್ಳಿ ನಿವಾಸಿ ಶಬಾನಾ ಬಾನು(33) ಮೃತ ದುರ್ದೈವಿ.ಕುಮಾರ್ ಎಂಬಾತನನ್ನ ವಿವಾಹವಾಗಿದ್ದ ಶಬಾನಾ ಬಾನು ಅನಾರೋಗ್ಯದಿಂದ ಬಳಲುತ್ತಿದ್ದರು.ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ತೆರಳಿದ್ದರು.ಚಿಕಿತ್ಸೆ ವೆಚ್ಚ ಭರಿಸಲು ಸಾಧ್ಯವಾಗದೆ ಬೆಂಗಳೂರಿನಿಂದ ಕಾರಿನಲ್ಲಿ ಹಿಂದಿರುಗುತ್ತಿದ್ದಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.ಈ ಸಂಭಂಧ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…