
ಸರ್ಕಾರಿ ಬಸ್ ಹಾಗೂ ಬೈಕ್ ಢಿಕ್ಕಿ…ಓರ್ವ ಸಾವು…ಮತ್ತೊಬ್ಬ ಗಂಭೀರ…
- CrimeMysore
- November 6, 2022
- No Comment
- 163

ಸರ್ಕಾರಿ ಬಸ್ ಹಾಗೂ ಬೈಕ್ ಢಿಕ್ಕಿ…ಓರ್ವ ಸಾವು…ಮತ್ತೊಬ್ಬ ಗಂಭೀರ…

ಹುಣಸೂರು,ನ6,Tv10 ಕನ್ನಡ
ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು ಮತ್ತೊಬ್ಬರ ಸ್ಥಿತಿ ಗಂಭೀರವಾದ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಬಸ್ ಸ್ಟ್ಯಾಂಡ್ ಬಳಿ ನಿನ್ನೆ ತಡರಾತ್ರಿ ನಡೆದಿದೆ.ಬೈಕಿನಲ್ಲಿದ್ದ ರಾಮೇಗೌಡ(48)ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸತೀಶ್(45)ಗಾಯಗೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಬೈಕ್ ಸವಾರರು ಬಿಳಿಕೆರೆ ಹತ್ತಿರದ ರಂಗಯ್ಯನ ಕೊಪ್ಪಲು ಗ್ರಾಮದ ನಿವಾಸಿಗಳು.ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…