
ನ.19 ರಂದು ಹೆಚ್.ಡಿ.ಕೋಟೆಯಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ…
- Mysore
- November 17, 2022
- No Comment
- 271
ನ.19 ರಂದು ಹೆಚ್.ಡಿ.ಕೋಟೆಯಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ…
ಹೆಚ್.ಡಿ.ಕೋಟೆ,ನ17,Tv10 ಕನ್ನಡ*
ನ.19 ರಂದು ಹೆಚ್.ಡಿ.ಕೋಟೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಫಿಕ್ಸ್ ಆಗಿದೆ.ಕಂದಾಯ ಸಚಿವರಾದ ಆರ್. ಅಶೋಕ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ನಡೆ – ಹಳ್ಳಿ ಕಡೆ ಕಾರ್ಯಕ್ರಮವು ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಂಚನಹಳ್ಳಿ ಗ್ರಾಮದ ಭೀಮನಕೊಲ್ಲಿ ದೇವಸ್ಧಾನ ಆವರಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡುವ ಮಳಿಗೆಗಳನ್ನು ಸ್ಧಾಪಿಸಲಾಗುತ್ತಿದೆ.
ಸದರಿ ಮಳಿಗೆಗಳಲ್ಲಿ ವಿವಿಧ ಯೋಜನೆಗಳಲ್ಲಿ ಸಾರ್ವಜನಿಕರಿಗೆ ದೊರೆಯುವ ಸೌಲಭ್ಯಗಳ ಬಗ್ಗೆ ಹಾಗೂ ಸವಲತ್ತುಗಳನ್ನು ಪಡೆಯಲು ಅನುಸರಿಸಬೇಕಾದ ವಿಧಾನಗಳ ಬಗ್ಗೆ ಮಾಹಿತಿ ಇರುತ್ತದೆ. ಮೈಸೂರು ಜಿಲ್ಲೆಯ ಎಲ್ಲ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳವಂತೆ ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ…