
ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ…ಬಂದೂಕು ಸಮೇತ ಅಂದರ್…
- CrimeMysore
- November 26, 2022
- No Comment
- 130

ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ…ಬಂದೂಕು ಸಮೇತ ಅಂದರ್…
ಎಚ್.ಡಿ.ಕೋಟೆ,ನ26,Tv10 ಕನ್ನಡ
ಅಕ್ರಮವಾಗಿ ಜಿಂಕೆ ಭೇಟೆಯಾಡಿದ್ದ ಇಬ್ಬರು ಆರೋಪಿಗಳನ್ನ ಅರಣ್ಯ ಇಲಾಖೆ ಅಧಿಕಾರಿಗಳು ಬಂದೂಕಿನ ಸಮೇತ ಅರೆಸ್ಟ್ ಮಾಡಿದ್ದಾರೆ. ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ.
ಮೇಡಿಕುಪ್ಪೆ ಅರಣ್ಯ ಇಲಾಖೆ ಸಿಬ್ಬಂಧಿಗಳು ನಡೆಸಿದ ಮಿಂಚಿನ ಕಾರ್ಯಾಚರಣೆಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಮೇಟಿಕುಪ್ಪೆಯ ಅಭಿಷೇಕ್ ಮತ್ತು ಕಲ್ಲಹಟ್ಟಿ ನೆಹರು ನಾಯಕ್ ಬಂಧಿತರು.
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಎಚ್.ಡಿ.ಕೋಟೆ ತಾಲೋಕಿನ ಮೇಟಿಕುಪ್ಪೆ ಅರಣ್ಯ ವ್ಯಾಪ್ತಿಯಲ್ಲಿ ಆರೋಪಿಗಳು ಭೇಟೆ ಆಡಿದ್ದರು.ಜಿಂಕೆ ಕೊಂದು ಮೃತದೇಹ ಸಾಗಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ.ಬಂಧಿತರ ವಿರುದ್ದ ವನ್ಯಜೀವಿ ಕಾಯ್ದೆ ಪ್ರಕರಣ ದಾಖಲಿಸಲಾಗಿದೆ.
ಆರೋಪಿಗಳಿಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ತಂಡ ರಚಿಸಿ ಶೋಧನಾ ಕಾರ್ಯ ಆರಂಭಿಸಲಾಗಿದೆ.
ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳಾದ ಹರ್ಷಕುಮಾರ್, ರಂಗಸ್ವಾಮಿ ಮಾರ್ಗದರ್ಶನದಲ್ಲಿ
ಹರ್ಷಿತ್, ಶಿವಕುಮಾರ್, ನಿರಂಜನ್ ಕಟ್ಟಿ, ಆನಂದ್ ತಂಡ ಕಾರ್ಯಾಚರಣೆ ನಡೆಸಿದೆ…