ಚೀಲ ಬದಲಿಸಿ ಸರ್ಕಾರದ ರಿಯಾಯಿತಿ ಯೂರಿಯಾ ಮಾರಾಟ ಯತ್ನ…ಐವರ ಬಂಧನ…290 ಮೂಟೆ ಯೂರಿಯಾ ವಶ…

ಚೀಲ ಬದಲಿಸಿ ಸರ್ಕಾರದ ರಿಯಾಯಿತಿ ಯೂರಿಯಾ ಮಾರಾಟ ಯತ್ನ…ಐವರ ಬಂಧನ…290 ಮೂಟೆ ಯೂರಿಯಾ ವಶ…

ಚೀಲ ಬದಲಿಸಿ ಸರ್ಕಾರದ ರಿಯಾಯಿತಿ ಯೂರಿಯಾ ಮಾರಾಟ ಯತ್ನ…ಐವರ ಬಂಧನ…290 ಮೂಟೆ ಯೂರಿಯಾ ವಶ…

ಪಿರಿಯಾಪಟ್ಟಣ,ಡಿ6,Tv10 ಕನ್ನಡ
ರೈತರಿಗೆ ರಿಯಾಯಿತಿ ದರದಲ್ಲಿ ನೀಡಲಾಗುವ ಯೂರಿಯಾವನ್ನ ಉತ್ತಮ ಗುಣಮಟ್ಟದ ಬ್ರಾಂಡ್ ಚೀಲಕ್ಕೆ ಬದಲಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರು ಖದೀಮರನ್ನ ಬಂಧಿಸುವಲ್ಲಿ ಪಿರಿಯಾಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ.ಕೃಷಿ ಇಲಾಖೆ ಅಧಿಕಾರಿಗಳ ಜೊತೆಗೆ ಜಂಟಿ ಕಾರ್ಯಾಚರಣೆ ನಡೆಸಿದ ಪೊಲೀಸರು ಉತ್ತಮ ಗುಣಮಟ್ಟದ ಚೀಲದಲ್ಲಿ ತುಂಬಲಾದ 290 ಮೂಟೆ ರಿಯಾಯಿತಿ ಯೂರಿಯಾ ವಶಪಡಿಸಿಕೊಂಡಿದ್ದಾರೆ.ಯೂರಿಯಾ ಸಾಗಣಿಕೆ ಬಳಸಿದ ಲಾರಿ ಸಹ ವಶಪಡಿಸಿಕೊಳ್ಳಲಾಗಿದೆ.ಡ್ರೈವರ್ ಸೇರಿದಂತೆ ಐವರನ್ನ ಬಂಧಿಸಲಾಗಿದೆ.ನಿಖಿಲ್,ಮಹಮದ್ ಬಷೀರ್,ಜಸೀರ್,ರಜೀಬ್ ಹಾಗೂ ಸಚಿನ್ ಬಂಧಿತರು.ಪಿರಿಯಾಪಟ್ಟಣ ತಾಲೂಕು ತೆಲಗನಕುಪ್ಪೆ ಗ್ರಾಮದ ರಾಜಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ರಿಯಾಯಿತಿ ದರದಲ್ಲಿ ನೀಡಲಾಗುವ ಯೂರಿಯಾವನ್ನ ಸಂಗ್ರಹಿಸಿ TECHNICAL GRADE UREA ಎಂಬ ಬ್ರಾಂಡ್ ನಮೂದಿಸಿರುವ ಚೀಲಗಳಿಗೆ ಬದಲಾಯಿಸಿ ಕೇರಳಾ ರಾಜ್ಯಕ್ಕೆ ಸಾಗಿಸಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಿ ಯೂರಿಯಾ ಮೂಟೆಗಳನ್ನ ವಶಪಡಿಸಿಕೊಂಡು ಆರೋಪಿಗಳನ್ನ ಬಂಧಿಸಲಾಗಿದೆ.ಅನಾಮಧೇಯ ವ್ಯಕ್ತಿ ನೀಡಿದ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿ ಪ್ರಸಾದ್ ರವರು ಪಿರಿಯಾಪಟ್ಟಣ ಠಾಣೆ ಪೊಲೀಸರ ನೆರವಿನಿಂದ ದಾಳಿ ನಡೆಸಿದ್ದಾರೆ.ಪಿರಿಯಾಪಟ್ಟಣ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *