ಧರ್ಮ ಸಂಸ್ಕೃತಿ ಪರಂಪರೆ ಉಳಿವಿಗೆ ಹಿಂದುಗಳು ಒಗ್ಗಟ್ಟಾಗಬೇಕು…ಶಾಸಕ ಎಲ್ ನಾಗೇಂದ್ರ ಅಭಿಪ್ರಾಯ…

ಧರ್ಮ ಸಂಸ್ಕೃತಿ ಪರಂಪರೆ ಉಳಿವಿಗೆ ಹಿಂದುಗಳು ಒಗ್ಗಟ್ಟಾಗಬೇಕು…ಶಾಸಕ ಎಲ್ ನಾಗೇಂದ್ರ ಅಭಿಪ್ರಾಯ…

  • Politics
  • December 7, 2022
  • No Comment
  • 260

ಧರ್ಮ ಸಂಸ್ಕೃತಿ ಪರಂಪರೆ ಉಳಿವಿಗೆ ಹಿಂದುಗಳು ಒಗ್ಗಟ್ಟಾಗಬೇಕು…ಶಾಸಕ ಎಲ್ ನಾಗೇಂದ್ರ ಅಭಿಪ್ರಾಯ…

ಮೈಸೂರು,ಡಿ7,Tv10 ಕನ್ನಡ
ಧರ್ಮ,ಸಂಸ್ಕೃತಿ,ಪರಂಪರೆ ಉಳಿವಿಗೆ ಹಿಂದೂಗಳು ಒಗ್ಗಟ್ಟಾಗಬೇಕು,ಶತ ಶತಮಾನಗಳ ಇತಿಹಾಸ, ಪರಂಪರೆ, ಶ್ರೀಮಂತಿಕೆ ಹೊಂದಿರುವ ಜಗತ್ತಿನ ಶ್ರೇಷ್ಠ ಧರ್ಮ ನಮ್ಮ ಹಿಂದೂ ಧರ್ಮ ಎಂದು ಶಾಸಕ ಎಲ್ ನಾಗೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ಯಾದವಗಿರಿಯಲ್ಲಿರುವ  600 ವರ್ಷದ ಪುರಾತನದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಶ್ರೀ ಉತ್ತರಾದಿ ಮಠ ವತಿಯಿಂದ ಏರ್ಪಡಿಸಲಾಗಿದ್ದ ಹನುಮಾನ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇಂತಹ ಶ್ರೇಷ್ಠ ಧರ್ಮ, ಸಂಸ್ಕೃತಿ, ಪರಂಪರೆ ಉಳಿವಿಗಾಗಿ ಹಿಂದುಗಳಾದ ನಾವೆಲ್ಲರೂ ಒಗ್ಗಟ್ಟಾಗಬೇಕು ಎಂದು ಶಾಸಕರು ಕರೆ ನೀಡಿದರು.
ಜಗತ್ತಿನ ಶಾಂತಿ, ಅಹಿಂಸ ಪಠಿಸಿದ ದೇಶ, ಸಂಸ್ಕೃತಿ ನಮ್ಮದು ಗ್ರೀಕರು, ರೋಮನರಿಗೆ ಸರಿಸಮನಾದ ಪ್ರಾಚೀನತ ಹೊಂದಿದೆ ಹಿಂದೂ ಧರ್ಮ ಜಗತ್ತಿಗೆ ತನ್ನದೇ ಆದ ಕೊಡುಗೆ ನೀಡಿದೆ ಎಂದು ಅವರು ಹೇಳಿದರು
 
ಹನುಮ ಜಯಂತಿ ಅಂಗವಾಗಿ ಶ್ರೀ ಹನುಮದ್ ವ್ರತ ಪ್ರಯುಕ್ತ ಪವಮಾನ ಹೋಮ, ನವಗ್ರಹ ಹೋಮ,
ನಿರ್ಮಾಲ್ಯ ವಿಸರ್ಜನೆ, ಪಂಚಾಮೃತ ಅಭಿಷೇಕ, ಮಧು ಅಭಿಷೇಕ, ಪಲ್ಲಕ್ಕಿ ಉತ್ಸವ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದ ಸಾಧಕರಾದ ವಿದ್ವಾನ್ ಶ ಅನಂತ ಕುಲಕರ್ಣಿ, ಡಾ. ಸಂಜೀವ್ ರಾವ್ ಗಿರಿಮಾಜಿ ಎಸ್, ನಗರಪಾಲಿಕ ಸದಸ್ಯರಾದ ಪ್ರಮೀಳಾ ಭರತ್, ಕಾಂಗ್ರೆಸ್ ಮುಖಂಡ ಎನ್. ಎಂ.ನವೀನ್ ಕುಮಾರ್, ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್ ರವರಿಗೆ ಸನ್ಮಾನಿಸಲಾಯಿತು.
3500 ಸಾವಿರಕ್ಕೂ ಹೆಚ್ಚು ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡಲಾಯಿತು
ನಂತರ ಪ್ರಖ್ಯಾತ ಗಾಯಕರು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತರಾದ ಬಾಗಲಕೋಟೆಯ ವಿದ್ವಾನ್ ಅನಂತ ಕುಲಕರ್ಣಿ ವತಿಯಿಂದ ಗಾಣ ಲಹರಿ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಯಿತು
ಇದೇ ಸಂದರ್ಭದಲ್ಲಿ ಶ್ರೀ ಉತ್ತರಾದಿ ಮಠದ ವ್ಯವಸ್ಥಾಪಕರಾದ ಪಂಡಿತ್ ಶ್ರೀ  ಅನಿರುದಾಚಾರ್ಯ ಪಾಂಡುರಂಗಿ, ಮಹಾಪೌರರಾದ ಶಿವಕುಮಾರ್, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್, ಶ್ರೀ ಗುರು ರಾಘವೇಂದ್ರ ಸೇವಾ ಟ್ರಸ್ಟ್ ನ ಅಧ್ಯಕ್ಷ ಎಸ್ ಬಿ ವಾಸುದೇವ್ ಮೂರ್ತಿ, ಹರಿದಾಸ ಸಂಗೀತ ಸಾಹಿತ್ಯೋತ್ಸವ ಸಮಿತಿಯ ಕಾರ್ಯದರ್ಶಿ ರವಿಕುಮಾರ್ ಎಸ್, ಪ್ರಧಾನ ಅರ್ಚಕರಯ  ನಾ ಗಭೂಷಣ್ ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *