ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ 1 ಲಕ್ಷ ರೂ ಸ್ವಯಂ ಉದ್ಯೋಗ ಸಾಲ ವಿತರಣೆ…EWS ರಾಜ್ಯದಲ್ಲೂ ಅನುಷ್ಠಾನದ ಭರವಸೆ…ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ…

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ 1 ಲಕ್ಷ ರೂ ಸ್ವಯಂ ಉದ್ಯೋಗ ಸಾಲ ವಿತರಣೆ…EWS ರಾಜ್ಯದಲ್ಲೂ ಅನುಷ್ಠಾನದ ಭರವಸೆ…ನಗರ ಬಿಜೆಪಿ ಅಧ್ಯಕ್ಷ ಶ್ರೀವತ್ಸ…

ಮೈಸೂರು,ಡಿ13,Tv10 ಕನ್ನಡ
ವಿಪ್ರಸಹಾಯವಾಣಿ ವತಿಯಿಂದ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಪುರುಷೋತ್ತ ಸ್ವಯಂ ಉದ್ಯೋಗ ಸಾಲ ಯೋಜನೆಯ ಅನುಮೋದನೆ ಪತ್ರಗಳನ್ನು ಫಲಾನುಭವಿಗಳಿಗೆ ನಗರದ ರಾಮಾನುಜ ರಸ್ತೆಯಲ್ಲಿರುವ ಜನ ಸೇವಾ ಕೇಂದ್ರದಲ್ಲಿ ವಿತರಿಸಲಾಯಿತು.
ಮೈಸೂರು ನಗರ ಬಿಜೆಪಿ ಅಧ್ಯಕ್ಷ ಟಿ.ಎಸ್. ಶ್ರೀವತ್ಸ ಫಲಾನುಭವಿಗಳಿಗೆ ಸಾಲದ ಅನುಮೋದನೆ ಪತ್ರ ಹಾಗು ಸಿಹಿ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಟಿ.ಎಸ್. ಶ್ರೀವತ್ಸ ರವರು ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರನ್ನು ಆರ್ಥಿಕವಾಗಿ ಪುನಶ್ಚೇತನ ಗೊಳಿಸಿ, ಸ್ವಯಂ ಉದ್ಯೋಗಸ್ಥರನ್ನಾಗಿ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೊಂಡಿದೆ. ಹಲಾವರು ವರ್ಷಗಳಿಂದ ಬ್ರಹ್ಮಣರಿಗೆ ಸರ್ಕಾರದ ಯಾವುದೇ ಯೋಜನೇಗಳು ಇಲ್ಲದಿದ್ದ ಕಾರಣ ಯೋಜನೆಗೆ ಬೇಕಿರುವ ಧಾಖಲೆಗಳು, ಪ್ರಕ್ರಿಯೆಗಳ ಬಗ್ಗೆ ಹಲವರಿಗೆ ಅರಿವಿಲ್ಲ ಮತ್ತು ಯೋಜನೆಯ ಮಾಹಿತಿ ಸಾಕಷ್ಟು ಜನರಿಗೆ ತಲುಪಿಲ್ಲ. ಹೀಗಿದ್ದರೂ ವಿಪ್ರ ಸಹಾಯವಾಣಿ ಹಾಗು ಕೆ.ಎಂ. ನಿಶಾಂತ್ ಜನ ಸೇವಾ ಕೇಂದ್ರದ ಮೂಲಕ ಫಲಾನುಭವಿಗಳನ್ನು ಗುರುತಿಸಿ ಯೋಜನೆಯ ಬಗ್ಗೆ ಮಾಹಿತಿ ನೀಡಿ, ಬೇಕಿರುವ ಎಲ್ಲಾ ಧಖಲೆಗಳನ್ನು ಪಡೆದು ಸವಲತ್ತುಗಳನ್ನು ತಲುಪಿಸುತ್ತಿರುವುದು ಶ್ಲಾಘನಿಯ.
ಈಗಾಗಲೆ ರಾಜ್ಯ ಸರ್ಕಾರ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಿಕರಿಗೆ 5000 ರೂ ಸಹಾಯಧನವನ್ನು ನೀಡುತ್ತಿದ್ದು ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಮೂಡಿಸಿ ಕಾಶಿಗೆ ತೆರಳಲು ಉತ್ತೇಜಿಸಬೇಕಿದೆ ಹಾಗು ಶೀಘ್ರವಾಗಿ ರಾಜ್ಯದಲ್ಲೂ ಬಿಜೆಪಿ ಸರ್ಕಾರ ಇ.ಡಬ್ಲೂ.ಎಸ್. ಅನ್ನು ಅನುಷ್ಠಾನಕ್ಕೆ ತರಲಿದೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ, ಜನ ಸೇವಾ ಕೇಂದ್ರದ ಸಂಸ್ಥಾಪಕ ಕೆ.ಎಂ. ನಿಶಾಂತ್, ವಿಪ್ರ ಸಹಾಯ ವಾಣಿಯ ವಿಕ್ರಂ ಅಯ್ಯಂಗಾರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಿರಿಧರ್, ಬ್ರಾಹ್ಮಣ ಅಭಿವೃದ್ದಿ ಮಂಡಳಿಯ ಬಾಲಕೃಷ್ಣ, ಕೆ.ಪಿ. ಮಧುಸೂಧನ್, ರಾಮಪ್ರಸಾದ್, ಎಂ.ಎನ್. ಧನುಷ್, ಮಧು, ಜಯರಾಂ, ಸತೀಶ್, ವಿಜಯ್ ಕುಮಾರ್, ಜಗದೀಶ್ ಹಾಗು ಹಲವು ಫಲಾನುಭವಿಗಳು ಉಪಸ್ಥಿತರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *