ಸಾರಿಗೆ ಅಧಿಕಾರಿಗೆ ಮೊಚ್ಚು ತೋರಿಸಿ ಬೆದರಿಕೆ ಹಾಕಿದ್ದ ಆರೋಪಿಗಳು ಅಂದರ್…ಉದಯಗಿರಿ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಸಾರಿಗೆ ಅಧಿಕಾರಿಗೆ ಮೊಚ್ಚು ತೋರಿಸಿ ಬೆದರಿಕೆ ಹಾಕಿದ್ದ ಆರೋಪಿಗಳು ಅಂದರ್…ಉದಯಗಿರಿ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಸಾರಿಗೆ ಅಧಿಕಾರಿಗೆ ಮೊಚ್ಚು ತೋರಿಸಿ ಬೆದರಿಕೆ ಹಾಕಿದ್ದ ಆರೋಪಿಗಳು ಅಂದರ್…ಉದಯಗಿರಿ ಠಾಣೆ ಪೊಲೀಸರ ಯಶಸ್ವಿ ಕಾರ್ಯಾಚರಣೆ…

ಮೈಸೂರು,ಡಿ16,Tv10 ಕನ್ನಡ
ಕರ್ತವ್ಯ ನಿರ್ವಹಿಸಲು ಬಂದ ಸಾರಿಗೆ ಇಲಾಖೆ ಹಿರಿಯ ಅಧಿಕಾರಿಗೆ ಮೊಚ್ಚು ತೋರಿಸಿ ಕೊಲೆ ಬೆದರಿಕೆ ಒಡ್ಡಿದ್ದ ಮಹಿಳೆ ಹಾಗೂ ಆಕೆಯ ಪತಿಯನ್ನ ಬಂಧಿಸುವಲ್ಲಿ ಉದಯಗಿರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬನ್ನಿಮಂಟಪದ ನಿವಾಸಿಗಳಾದ ಶಫೀಕ್ ಅಹಮದ್ ಹಾಗೂ ಪತ್ನಿ ಸೈಯದ್ ಮುನೀಬುನ್ನೀಸಾ ಬಂಧಿತ ಆರೋಪಿಗಳು.ಬಂಧಿತರಿಂದ ಕಾರು ಹಾಗೂ ಮೊಚ್ಚನ್ನ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಡಿಸೆಂಬರ್ 12 ರಂದು ಸಾರಿಗೆ ಅಧಿಕಾರಿ ಮರಿಗೌಡ ರಿಗೆ ಮೊಚ್ಚು ತೋರಿಸಿ ಬೆದರಿಕೆ ಹಾಕಿದ್ದ ಆರೋಪಿಗಳು ತಲೆ ಮರೆಸಿಕೊಂಡಿದ್ದರು.ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿತ್ತು.ಘಟನೆ ನಡೆದ ನಾಲ್ಕು ದಿನಗಳ ನಂತರ ಆರೋಪಿಗಳು ಸೆರೆಯಾಗಿದ್ದಾರೆ.

ಉದಯಗಿರಿಯಲ್ಲಿರು ಸಾತಗಳ್ಳಿ ಬಸ್ ಸ್ಟ್ಯಾಂಡ್ ಗೆ ಸೇರಿದ ವಾಣಿಜ್ಯ ಸಂಕೀರ್ಣವನ್ನ ಷಫೀಕ್ ಅಹಮದ್ ಗೆ 12 ವರ್ಷಗಳ ಅವಧಿಗೆ ಬಾಡಿಗೆಗೆ ನೀಡಲಾಗಿತ್ತು.ನಿಗದಿತ ಸಮಯಕ್ಕೆ ಬಾಡಿಗೆ ಪಾವತಿಸದೆ ನ್ಯಾಯಾಲಯದ ಮೊರೆ ಹೋಗಿದ್ದ ಶಫೀಕ್ ಮಧ್ಯಂತರ ತಡೆಯಾಜ್ಞೆ ಪಡೆದಿದ್ದ.ನಂತರದ ದಿನಗಳಲ್ಲಿ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆಯನ್ನ ರದ್ದುಪಡಿಸಿತ್ತು.ಈ ಹಿನ್ನಲೆ ವಾಣಿಜ್ಯ ಸಂಕೀರ್ಣವನ್ನ ವಶಕ್ಕೆ ಪಡೆಯಲು ಕೆ.ಎಸ್.ಆರ್.ಟಿ.ಸಿ.ವಿಭಾಗೀಯ ಸಂಚಲನಾಧಿಕಾರಿ ಮರಿಗೌಡ ರವರ ಇತರ ಅಧಿಕಾರಿಗಳ ಜೊತೆ ತೆರಳಿದ್ದ ವೇಳೆ ಇಬ್ಬರು ಮಹಿಳೆಯರ ಜೊತೆ ಬಂದ ಸೈಯದ್ ಮುನಿಬುನ್ನೀಸಾ ಮೊಚ್ಚು ತೋರಿಸಿ ಧಂಕಿ ಹಾಕಿದ್ದರು.ಮರ್ಡರ್ ಮಾಡಿ ಜೈಲಿಗೆ ಹೋಗುವುದಾಗಿ ಬೆದರಿಕೆ ಹಾಕಿ ಪರಾರಿಯಾಗಿದ್ದರು.ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿತ್ತು.ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ರವರು ಪ್ರಕರಣವನ್ನ ಭೀರವಾಗಿ ಪರಿಗಣಿಸಿದ್ದರು.ಕಾನೂನು ಸುವ್ಯವಸ್ಥೆಯ ಡಿಸಿಪಿ ಪ್ರದೀಪ್ ಘುಂಟಿ ಮಾರ್ಗದರ್ಶನದಲ್ಲಿ,ದೇವರಾಜ ಉಪವಿಭಾಹದ ಎಸಿಪಿ ಶಶಿಧರ್ ಉಸ್ತುವಾರಿಯಲ್ಲಿ ಉದಯಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಪಿ.ಕೆ.ರಾಜು,ಎಸ್ಸೈಗಳಾದ ಸುನಿಲ್,ರಾಜು,ರೂಪೇಶ್ ಸಿಬ್ಬಂದಿಗಳಾದ ಸಿದ್ದೀಖ್ ಅಹಮದ್,ನಾಗೇಂದ್ರಮೂರ್ತಿ,ವಿನೋದ್ ರಾಥೋಡ್,ಮಲ್ಲಿಕಾರ್ಜುನ,ನಾಜಿಯಾಬಾನು,ಸಂತೋಷ್,ಸಮೀರ್,ಶಿವರಾಜಪ್ಪ,ರವಿಕುಮಾರ್ ಹಾಗೂ ಕುಮಾರ್ ರವರನ್ನೊಳಗೊಂಡ ವಿಶೇಷ ತಂಡ ರಚಿಸಲಾಗಿತ್ತು.ಇಡೀ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನ ಸೆದೆಬಡಿಯುವಲ್ಲಿ ಯಶಸ್ವಿಯಾಗಿದ್ದಾರೆ…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *