ಶ್ರೀರಂಗಪಟ್ಟಣ: `2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪ್ರಕಟಿಸಿರುವ 93 ಕ್ಷೇತ್ರಗಳ ಘೋಷಿತ ಅಭ್ಯರ್ಥಿಗಳ ಪೈಕಿ 65 ಮಂದಿ ಸುಲಭವಾಗಿ ಜಯ ಗಳಿಸಲಿದ್ದಾರೆ’ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಶ್ರೀರಂಗಪಟ್ಟಣ: `2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪ್ರಕಟಿಸಿರುವ 93 ಕ್ಷೇತ್ರಗಳ ಘೋಷಿತ ಅಭ್ಯರ್ಥಿಗಳ ಪೈಕಿ 65 ಮಂದಿ ಸುಲಭವಾಗಿ ಜಯ ಗಳಿಸಲಿದ್ದಾರೆ’ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಶ್ರೀರಂಗಪಟ್ಟಣ: `2023ರ ವಿಧಾನಸಭೆ ಚುನಾವಣೆಗೆ ಜೆಡಿಎಸ್ ಪ್ರಕಟಿಸಿರುವ 93 ಕ್ಷೇತ್ರಗಳ ಘೋಷಿತ ಅಭ್ಯರ್ಥಿಗಳ ಪೈಕಿ 65 ಮಂದಿ ಸುಲಭವಾಗಿ ಜಯ ಗಳಿಸಲಿದ್ದಾರೆ’ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣಕ್ಕೆ ಡಿ.23ರಂದು ಬರಲಿರುವ ಜೆಡಿಎಸ್ ಪಂಚರತ್ನ ರಥಯಾತ್ರೆಯ ನಿಮಿತ್ತ ಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಜೆಡಿಎಸ್ ಮುಖಂಡರು, ಕಾರ್ಯ ಕರ್ತರ ಸಭೆಯಲ್ಲಿ ಮಾತನಾಡಿದರು.

‘ಪಕ್ಷದ ವರಿಷ್ಠರಾದ ಡಿ. ದೇವೇಗೌಡ ಮತ್ತು ಎಚ್‌.ಡಿ. ಕುಮಾರಸ್ವಾಮಿ ಸಮರ್ಥ ಅಭ್ಯರ್ಥಿ ಗಳನ್ನೇ ಘೋಷಿಸಿದ್ದಾರೆ. ಉಳಿದ 131 ಕ್ಷೇತ್ರಗಳಿಗೂ ಜನಮನ್ನಣೆ ಗಳಿಸಿರುವ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದು, ಈ ಬಾರಿ ಜೆಡಿಎಸ್ ಸ್ವತಂತ್ರವಾಗಿ ಸರ್ಕಾರ ರಚಿಸಲಿದೆ’ ಎಂದು ಹೇಳಿದರು.

‘ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಮತ್ತು ಕಾಂಗ್ರೆಸ್‌ನ ದ್ವಂದ್ವ ನೀತಿಯಿಂದ ಜೆಡಿಎಸ್‌ಗೆ ಅನುಕೂಲ ಆಗಲಿದೆ. ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ ಸರ್ಕಾರ ನೀಡಿದ್ದ ನೂರಾರು ಕೋಟಿ ರೂಪಾಯಿ ಅನುದಾನವನ್ನು ಬಿಜೆಪಿ ಸರ್ಕಾರ ತಡೆಹಿಡಿದು ದ್ರೋಹ ಎಸಗಿದೆ. ಸಚಿವ ನಾರಾಯಣಗೌಡ ಪೇಟೆಗೆ ಮಾತ್ರ ಸಚಿವರಾಗಿದ್ದು, ಜಿಲ್ಲೆಯ ಇತರ ಕ್ಷೇತ್ರಗಳನ್ನು ಕಡೆಗಣಿಸಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರ ಬಗ್ಗೆ

ಹುಸಿ ಪ್ರೀತಿ ತೋರುತ್ತಿದೆ’ ಎಂದು ಟೀಕಿಸಿದರು.

ಜೆಡಿಎಸ್ ಕ್ಷೇತ್ರ ಘಟಕದ ಅಧ್ಯಕ್ಷ ಪಾಲಹಳ್ಳಿ ಮುಕುಂದ ಮಾತನಾಡಿ, ‘ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಪಂಚರತ್ನ ರಥಯಾತ್ರೆ ಡಿ.23ರಂದು ಬೆಳಿಗ್ಗೆ ಕ್ಯಾತುಂಗೆರೆ ಗ್ರಾಮದ ಮೂಲಕ ಕ್ಷೇತ್ರ ಪ್ರವೇಶಿಸಲಿದೆ. ಕೊತ್ತ, ಕೊಡಿಯಾಲ, ಅರಕೆರೆ, ಮಂಡ್ಯ ಕೊಪ್ಪಲು, ಮಹದೇವಪುರ, ದೊಡ್ಡಪಾಳ್ಯ, ಮರಳಾಗಾಲ, ಬಾಬುರಾಯನ ಕೊಪ್ಪಲು ಮಾರ್ಗವಾಗಿ ಮಧ್ಯಾಹ್ನ 1.30ಕ್ಕೆ ಪಟ್ಟಣಕ್ಕೆ ಬರಲಿದೆ. ಪಾಲಹಳ್ಳಿ, ಹೊಸಹಳ್ಳಿ, ಬೆಳಗೊಳ ಪಂಪ್‌ಹೌಸ್, ಹೊಸ ಆನಂದೂರು, ಬೆಳಗೊಳ, ಹುಲಿಕೆರೆ ಮೂಲಕ ಸಂಜೆ

ಶ್ರೀರಂಗಪಟ್ಟಣ ಟಿಎಪಿಸಿಎಂಎಸ್‌ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿದರು.ಪಾಲಹಳ್ಳಿ ಮುಕುಂದ, ಎಂ.ಸಂತೋಷ್ ಇದ್ದಾರೆ

7 ಗಂಟೆಗೆ ಕೆಆರ್‌ಎಸ್‌ ತಲುಪಲಿದ್ದು, ಕುಮಾರಸ್ವಾಮಿ ಅವರು ಕೆಆರ್‌ಎಸ್‌ನಲ್ಲಿ ವಾಸ್ತವ್ಯ ಹೂಡಲಿದ್ದಾರೆ’ ಎಂದರು.

ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಎಂ. ಸಂತೋಷ್, ಕಾರ್ಯಾಧ್ಯಕ್ಷ ಎನ್. ಶಿವಸ್ವಾಮಿ, ಪುರಸಭೆ ಅಧ್ಯಕ್ಷೆ ಪಿ. ನಿರ್ಮಲಾ, ಉಪಾಧ್ಯಕ್ಷ ನರಸಿಂಹೇ | ಗೌಡ, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಿವಾಸ್, ಸದಸ್ಯರಾದ ಕೃಷ್ಣಪ್ಪ, ಪ್ರಕಾಶ್, ಎಸ್.ಟಿ. ರಾಜು, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಪದ್ಮನಾಭ, ತಾ.ಪಂ ಮಾಜಿ ಅಧ್ಯಕ್ಷ ಎ.ಸತೀಶ್, ಟಿಎಪಿಸಿಎಂಎಸ್‌ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಪಿಎಸ್‌ಎಸ್‌ ಮಾಜಿ ಅಧ್ಯಕ್ಷ ಚಿಕ್ಕರಾಮಂಜೇಗೌಡ, ಟಿ.ಎಂ. ದೇವೇಗೌಡ, ಎಜಾಸ್‌ಪಾಷ ಇದ್ದರು.

Spread the love

Related post

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ…

Tv10 ವರದಿ ಫಲಶೃತಿ…ಚಿರತೆ ಕಂಡುಬಂದ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ…ಚಿರತೆ ಸೆರೆಗೆ ಕಾರ್ಯಾಚರಣೆ ಮೈಸೂರು,ಸೆ17,Tv10 ಕನ್ನಡ ಜಮೀನಿನ ಮಧ್ಯಭಾಗದಲ್ಲಿ ಚಿರತೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದ ದೃಶ್ಯ ಸಿಸಿ…
ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ…

ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ…ವ್ಯಕ್ತಿಗೆ 1.97 ಕೋಟಿ ವಂಚನೆ… ಮೈಸೂರು,ಸೆ15,Tv10 ಕನ್ನಡ ರಿಮೋಟ್ ಆಕ್ಸೆಸ್ ಟ್ರೋಜನ್ (RAT) ಮೂಲಕ ಸೈಬರ್ ದಾಳಿ ನಡೆಸಿ ವ್ಯಕ್ತಿಯೋರ್ವರಿಗೆ…
ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ

ವಿವಿಧ ಲಯನ್ಸ್ ಸಂಸ್ಥೆ ವತಿಯಿಂದ ಪ್ರಾಣಿ ದತ್ತು ಸ್ವೀಕಾರ ಮೈಸೂರು, ಸೆ.15: ಪ್ರಾಣಿ ಸಂರಕ್ಷಣೆ ಹಾಗೂ ವನ್ಯಜೀವಿಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಲಯನ್ಸ್ ಇಂಟರ್‌ನ್ಯಾಷನಲ್, ಲಯನ್ಸ್…

Leave a Reply

Your email address will not be published. Required fields are marked *