ವಂಚನೆಯಿಂದ ಗ್ರಾಹಕ ಪಾರಾಗಲು ಕಾನೂನು ಹಕ್ಕಿನ ಅರಿವು ಅಗತ್ಯ…ಪೊಲೀಸ್ ಇನ್ಸ್ಪೆಕ್ಟರ್ ರವೀಂದ್ರ ಸಿ ಎಂ

ವಂಚನೆಯಿಂದ ಗ್ರಾಹಕ ಪಾರಾಗಲು ಕಾನೂನು ಹಕ್ಕಿನ ಅರಿವು ಅಗತ್ಯ…ಪೊಲೀಸ್ ಇನ್ಸ್ಪೆಕ್ಟರ್ ರವೀಂದ್ರ ಸಿ ಎಂ

  • Mysore
  • December 23, 2022
  • No Comment
  • 194

ವಂಚನೆಯಿಂದ ಗ್ರಾಹಕ ಪಾರಾಗಲು ಕಾನೂನು ಹಕ್ಕಿನ ಅರಿವು ಅಗತ್ಯ…ಪೊಲೀಸ್ ಇನ್ಸ್ಪೆಕ್ಟರ್ ರವೀಂದ್ರ ಸಿ ಎಂ

ಮೈಸೂರು,ಡಿ23,Tv10 ಕನ್ನಡ
ಪ್ರತಿಯೊಬ್ಬ ಗ್ರಾಹಕನು ಸಹ ತಮ್ಮ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಹೊಂದಿದಾಗ ಮಾತ್ರ ವಂಚನೆ ಎಂಬ ಸುಳಿಯಿಂದ ಹೊರಬರಲು ಸಾಧ್ಯ ಎಂದು ಸರಸ್ವತಿಪುರಂ ಪೊಲೀಸ್ ಠಾಣೆ ನಿರೀಕ್ಷಕರಾದ ರವೀಂದ್ರ ಸಿ ಎಂ ಅಭಿಪ್ರಾಯಪಟ್ಟಿದ್ದಾರೆ.
ಸರಸ್ವತಿಪುರಂನಲ್ಲಿರುವ ಟಿ.ಟಿ.ಎಲ್ ಕಾಲೇಜ್ ಆವರಣದಲ್ಲಿ ಟಿ.ಟಿ.ಎಲ್ ಟ್ರಸ್ಟ್ ಮತ್ತು ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಹಾಗೂ ಟಿ.ಟಿ.ಎಲ್ ವಾಣಿಜ್ಯ ವ್ಯವಹಾರ ನಿರ್ವಹಣಾ ಕಾಲೇಜು ಮತ್ತು ಟಿ .ಟಿ. ಎಲ್ ಸ್ವಾತಂತ್ರ್ಯ ಪದವಿ ಪೂರ್ವ ಕಾಲೇಜು
ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ‘ರಾಷ್ಟ್ರೀಯ ಗ್ರಾಹಕರ ದಿನಾಚರಣೆ’ ಅಂಗವಾಗಿ ಗ್ರಾಹಕ ಹಕ್ಕುಗಳ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಪ್ರತಿಯೊಬ್ಬ ಗ್ರಾಹಕರ ರಕ್ಷಣೆಯನ್ನು ಹಿತದೃಷ್ಟಿಯಲ್ಲಿಟ್ಟು ಕೊಂಡು 1984ರಲ್ಲಿ ಗ್ರಾಹಕ ಕಾಯಿದೆ ಜಾರಿಗೆ ತಂದಿದೆ. ಪ್ರತಿಯೊಬ್ಬ ಗ್ರಾಹಕನು ವಸ್ತು ಮತ್ತು ಸೇವೆಗಳನ್ನು ನೋಂದಾಯಿತ ವ್ಯಕ್ತಿ ಅಥವಾ ಸಂಸ್ಥೆಯಿಂದ ಪಡೆಯಬೇಕು.ಅನ್ಯಾಯ ಕಂಡು ಬಂದಲ್ಲಿ ಕಾನೂನಾತ್ಮಕವಾಗಿ ಕನ್ಸ್ಯೂಮರ್ ಕೋರ್ಟ್ ಗೆ ತೆರಳಿ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ಸಲಹೆ ನೀಡಿದರು. ಪ್ರತಿಯೊಬ್ಬ ನಾಗರೀಕ ಸಮಾಜದಲ್ಲಿ ತನಗೆ ಬೇಕಾದ ಮಾಹಿತಿ ಪಡೆಯಲು ಮತ್ತು ಪ್ರಶ್ನೆ ಕೇಳಲು ಸ್ವಾತಂತ್ರವಿದೆ. ಕಾನೂನಾತ್ಮಕವಾಗಿ ಮಾಹಿತಿ ಹಕ್ಕಿನಲ್ಲಿದೆ ಆದರೆ ಅದನ್ನ ಕೆಲವರು ಸ್ವತಃ ಆರ್.ಟಿ.ಐ ಕಾರ್ಯಕರ್ತ ಎಂದು ವೈಭವಿಕರಿಸುವುದು ಸರಿಯಲ್ಲ, ಸೈಬರ್‌ ಅಪರಾಧಗಳಿಂದ ಎಚ್ಚರ ವಹಿಸಿ’ ಅನಾಮಧೇಯ ವ್ಯಕ್ತಿಗಳು ಮೊಬೈಲ್‌ಗೆ ಕರೆ ಮಾಡಿ ಓಟಿಪಿ ಹಾಗೂ ಇತರೆ ಸಂದೇಶಗಳನ್ನು ಕಳಿಸಿ ಬ್ಯಾಂಕ್‌ ಖಾತೆಯಿಂದ ಹಣ ದೋಚುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಆದ್ದರಿಂದ ಸಾರ್ವಜನಿಕರು ಅನಾಮಧೇಯ ಕರೆ ಹಾಗೂ ಸಂದೇಶಗಳಿಂದ ಎಚ್ಚರ ವಹಿಸಬೇಕು ಎಂದು ಕರೆ ನೀಡಿದರು.
ಮಹಿಳೆಯರು ಆಭರಣ ಧರಿಸಿ ತಿರುಗಾಡುವಾಗ ಜಾಗೃತಿಯಿಂದಿರಬೇಕು. ಪ್ರತಿಯೊಬ್ಬರು ಮೋಟಾರು ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನ ಪಾಲಿಸಬೇಕು, ಜೀವ ಉಳಿಸಿಕೊಳ್ಳಲು ಹೆಲ್ಮೆಟ್ ಧರಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಟಿ.ಟಿ.ಎಲ್ ಟ್ರಸ್ಟ್ ಆಡಳಿತ ಮತ್ತು ನಿಯೋಜನ ಅಧಿಕಾರಿ ಡಾಕ್ಟರ್ ಬಿ ವಿ ಪ್ರಶಾಂತ್, ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ಅಧ್ಯಕ್ಷರಾದ ಡಾ. ಜಿ ವಿ ರವಿಶಂಕರ್, ಸಂಘಟನಾ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಸಾಮಾಜಿಕ ಹೋರಾಟಗಾರ ಅಜಯ್ ಶಾಸ್ತ್ರಿ, ಪದವಿ ಕಾಲೇಜಿನ ಪ್ರಾಂಶುಪಾಲರಾದ ಶಶಿಕಲಾ ಎಸ್.ಆರ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಭ್ರಮರಾಂಬ ಎಸ್, ಡಾ. ಗೀತಾ, ಕಾಲೇಜಿನ ರೆಡ್ ಕ್ರಾಸ್ ಅಧಿಕಾರಿ ಗಿರೀಶ್, ಹಾಗೂ ಇನ್ನಿತರರು ಹಾಜರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *