ಪೌತಿಖಾತೆಗಳ ಬಗ್ಗೆ ರೈತರಲ್ಲಿ ಅರಿವು ಮೂಡಬೇಕು-ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ

ಪೌತಿಖಾತೆಗಳ ಬಗ್ಗೆ ರೈತರಲ್ಲಿ ಅರಿವು ಮೂಡಬೇಕು-ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ

ಪೌತಿಖಾತೆಗಳ ಬಗ್ಗೆ ರೈತರಲ್ಲಿ ಅರಿವು ಮೂಡಬೇಕು-ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ

ಮೈಸೂರು,ಡಿ26,Tv10 ಕನ್ನಡ
ಪೌತಿ ಖಾತೆಗಳ ಬಗ್ಗೆ ರೈತರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರ ಅವರು ತಿಳಿಸಿದ್ದಾರೆ.

ಕೃಷಿ ಇಲಾಖೆ ಮತ್ತು ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಮೈಸೂರು ಹಾಗೂ ಕೃಷಿಕ ಸಮಾಜ ಮೈಸೂರು. ಸಹಯೋಗದಲ್ಲಿ ನಾಗೇನಹಳ್ಳಿ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ ಅಂಗವಾಗಿ ರೈತ ಮತ್ತು ವಿಜ್ಞಾನಿಗಳ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜಮೀನಿನ ಅನುಭವದಲ್ಲಿ ಇದ್ದರು ಜಮೀನಿನ ಹಕ್ಕು ಪತ್ರ ಪಡೆಯಲು ಸಾಕಷ್ಟು ಜನರಿಗೆ ಸಾಧ್ಯವಾಗಿಲ್ಲ, ಯಾವುದೇ ರೀತಿಯ ನಕ್ಷೆಗಳು ಇಲ್ಲದೆ ರೈತರು ಉಳುಮೆ ಮಾಡುತಿದ್ದರೂ ಈ ಸಂಬಂಧ ಅವರು ಕಚೇರಿಗೆ ಬಂದು ಹಕ್ಕು ಪತ್ರಗಳನ್ನು ಪಡೆಯಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.ಪೌತಿ ಖಾತೆ ಪಡೆಯು ಬಗ್ಗೆ ಮಹಿಳೆಯರು ಹಿಂಜರಿಯದೆ ಮುಂದೆ ಬಂದು ತಮ್ಮ ಹಕ್ಕುಗಳನ್ನು ಪಡೆದುಕೊಳಬೇಕು, ಈ ಸಂಬಂಧ ರೈತರಿಗೆ ಪೌತಿ ಖಾತೆಗಳ ಬಗ್ಗೆ ಅರಿವು ಅವಶ್ಯಕವಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.ಕೃಷಿ ಇಲಾಖೆಯಲ್ಲಿ ರೈತರಿಗೆ ಅನೇಕ ಯೋಜನೆಗಳಿವೆ, ರೈತರು ಯೋಜನೆಗಳ ಬಗ್ಗೆ ತಿಳಿದು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ.ಬಿ.ಆರ್.ಪೂರ್ಣಿಮಾ ಅವರು ಮಾತನಾಡಿ ನರೇಗಾ ಯೋಜನೆ ರೈತರಿಗೆ ವರದಾನವಾಗಿದ್ದು ನರೇಗಾ ಯೋಜನೆಯ ಸದುಪಯೋಗಮಾಡಿಕೊಳ್ಳಲು ರೈತರು ಮುಂದಾಗಬೇಕು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಆತ್ಮ ಯೋಜನೆಯಡಿ 2021-22ನೇ ಸಾಲಿನಲ್ಲಿ ರಾಜ್ಯಮಟ್ಟದಲ್ಲಿ ಕೃಷಿ ಪಂಡಿತ ಹಾಗೂ ಉದಯೋನ್ಮುಖ ಕೃಷಿ ಪ್ರಶಸ್ತಿ ಪಡೆದ ಜಿಲ್ಲೆಯ ರೈತರಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿರ್ದೇಶಕರಾದ ಚಂದ್ರ ಶೇಖರ್, ತೋಟಗಾರಿಕೆ ಉಪ ನಿರ್ದೇಶಕರಾದ ರುದ್ರೇಶ್ , ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಲಪುರ ನಾಗೇಂದ್ರ, ರೈತ ಮುಖಂಡರಾದ ಹೊಸೂರ್ ಕುಮಾರ್, ವಿದ್ಯಾಸಾಗರ್ , ಕಿರಗಸೂರು ಶಂಕರ್ , ಕೃಷಿಕ ಸಮಾಜ ಅಧ್ಯಕ್ಷರಾದ ಕಲ್ಮಳ್ಳಿ ಶಿವಕುಮಾರ್ ಹಾಗೂ ಎಲ್ಲಾ ತಾಲ್ಲೂಕಿನ ರೈತರು ಉಪಸ್ಥಿತರಿದ್ದರು…

Spread the love

Related post

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ.

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ…

ಬರ ಘೋಷಣೆ ಮಾಡಿ ಒಂದು ತಿಂಗಳಾದರೂ ನಯಾಪೈಸೆ ಇಲ್ಲ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹನೂರು ವೆಂಕಟೇಶ್ ಕಿಡಿ. ಹನೂರು Tv10 ಕನ್ನಡ ಹನೂರು: ಹನೂರು ತಾಲೂಕನ್ನು ಬರಪೀಡಿತ…
ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…?

ವಿವಾದಿತ ಸರ್ಕಲ್ ನಲ್ಲಿ ರಾರಾಜಿಸಿದ ಪೊಲೀಸ್ ಜೀಪ್…ಇದು ಮುನ್ನೆಚ್ಚರಿಕೆ ಕ್ರಮವೇ…? ಮೈಸೂರು,ಸೆ13,Tv10 ಕನ್ನಡ ವಿವಾದಿತ ಮಾತೃಮಂಡಳಿ ವೃತ್ತವೀಗ ಪೊಲೀಸ್ ಜೀಪ್ ಗೆ ಆಶ್ರಯ ನೀಡಿದೆ.ಪ್ರತಿಮೆ ಇರಬೇಕಿದ್ದ ಜಾಗದಲ್ಲಿ ಪೊಲೀಸ್…
ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ…

ಇ ಖಾತೆ ಮಾಡಿಕೊಡಲು 50 ಸಾವಿರ ಲಂಚ ಪಡೆದ ಆರ್ ಐ ಮಂಜುನಾಥ್ ಸಸ್ಪೆಂಡ್…ಪಾಲಿಕೆ ಆಯುಕ್ತೆ ಎಂ.ಕೆ.ಸವಿತಾ ಆದೇಶ… ಮೈಸೂರು,ಸೆ10,Tv10 ಕನ್ನಡ ಇ ಖಾತೆ ಮಾಡಿಕೊಡಲು ವಕೀಲರೊಬ್ಬರಿಂದ 50…

Leave a Reply

Your email address will not be published. Required fields are marked *