ಮೈಸೂರಿನ ನಾಲ್ವರು ರೌಡಿಶೀಟರ್ ಗಳಿಗೆ ಗಡಿಪಾರು ಶಿಕ್ಷೆ…ನಗರ ಪೊಲೀಸ್ ಆಯುಕ್ತರ ಆದೇಶ…

ಮೈಸೂರಿನ ನಾಲ್ವರು ರೌಡಿಶೀಟರ್ ಗಳಿಗೆ ಗಡಿಪಾರು ಶಿಕ್ಷೆ…ನಗರ ಪೊಲೀಸ್ ಆಯುಕ್ತರ ಆದೇಶ…

ಮೈಸೂರಿನ ನಾಲ್ವರು ರೌಡಿಶೀಟರ್ ಗಳಿಗೆ ಗಡಿಪಾರು ಶಿಕ್ಷೆ…ನಗರ ಪೊಲೀಸ್ ಆಯುಕ್ತರ ಆದೇಶ…

ಮೈಸೂರು,ಜ6,Tv10 ಕನ್ನಡ
ಮೈಸೂರು ನಗರದ ನಾಲ್ವರು ರೌಡಿ ಶೀಟರ್ ಗಳಿಗೆ ಪೊಲೀಸ್ ಆಯುಕ್ತರಾದ ಬಿ.ರಮೇಶ್ ರವರು ಗಡಿಪಾರು ಆದೇಶ ಹೊರಡಿಸಿದ್ದಾರೆ.ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಇವರಿಗೆ ಮುಂದಿನ 6 ತಿಂಗಳವರೆಗೆ ಗಡಿಪಾರು ಶಿಕ್ಷೆ ಅನ್ವಯಿಸಲಿದೆ.

ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಸತೀಶ್ ಗೆ 6 ತಿಂಗಳ ಅವಧಿಯವರೆಗೆ ಚಾಮರಾಜನಗರ ಜಿಲ್ಲೆಗೆ,ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಮಧುಸೂಧನ್.@.ಪಾರ್ಟಿ ಗೆ 6 ತಿಂಗಳ ಅವಧಿಯವರೆಗೆ ಹಾಸನ ಜಿಲ್ಲೆಗೆ,ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಮಂಜುನಾಥ್.@.ಗೆಂಡೆ ಮಂಜ ಗೆ 6 ತಿಂಗಳ ಕಾಲ ಕೊಡಗು ಜಿಲ್ಲೆಗೆ ಹಾಗೂ ವಿದ್ಯಾರಣ್ಯಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಕುಮಾರ.@.ಕಪಾಲಿ ಗೆ 6 ತಿಂಗಳ ಕಾಲ ಚಿತ್ರದುರ್ಗ ಜಿಲ್ಲೆಗೆ ಗಡಿಪಾರು ಮಾಡುವಂತೆ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಆದೇಶಿಸಿದ್ದಾರೆ.

ಸದರಿ ರೌಡಿ ಶೀಟರ್ ಗಳ ಮೇಲೆ ರೌಡಿ ಹಾಳೆ ತೆಗೆದಿದ್ದರೂ ಮೈಸೂರಿನ ವಿವಿದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡು ಬಂದಿರುವ ಹಿನ್ನಲೆ ಆಯುಕ್ತರು ಕಠಿಣ ಕ್ರಮ ಕೈಗೊಂಡಿದ್ದಾರೆ.ಸಮಾಕದ ಸ್ವಾಸ್ಥ್ಯ ಕದಡುವುದು,ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವುದು,ಗೂಂಡಾ ವರ್ತನೆ,ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನಕ್ಕೆ ಮುಂದಾಗಿರುವ ಹಿನ್ನಲೆ ಗಡಿಪಾರು ಶಿಕ್ಷೆ ವಿಧಿಸಿದ್ದಾರೆ.ಸಾರ್ವಜನಿಕರ ಆಸ್ತಿಪಾಸ್ತಿಗೆ ಧಕ್ಕೆ ತರುವ ಸಂಭವ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆವಕ್ರಮವಾಗಿ ಗಡಿಪಾರು ಆದೇಶ ಹೊರಡಿಸಿದ್ದಾರೆ.

ಮುಂದಿನ 6 ತಿಂಗಳ ಕಾಲ ನಾಲ್ವರು ರೌಡಿ ಶೀಟರ್ ಗಳು ಮೈಸೂರನ್ನ ಪ್ರವೇಶಿಸದಂತೆ ಎಚ್ಚರಿಕೆ ನೀಡಲಾಗಿದೆ.

ಇಂತಹ ಚಟುವಟಿಕೆಗಳಲ್ಲಿ ಯಾವುದೇ ರೌಡಿ ಶೀಟರ್ ಗಳು ಭಾಗಿಯಾಗುವ ಸೂಚನೆ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಎಚ್ಚರಿಕೆ ನೀಡಿದ್ದಾರೆ…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *