ಜ.15 ರಂದು ಯೋಗಾಥಾನ್…ಯಶಸ್ಸಿಗೆ ಸಜ್ಜಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕರೆ…

ಜ.15 ರಂದು ಯೋಗಾಥಾನ್…ಯಶಸ್ಸಿಗೆ ಸಜ್ಜಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕರೆ…

ಜ.15 ರಂದು ಯೋಗಾಥಾನ್…ಯಶಸ್ಸಿಗೆ ಸಜ್ಜಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕರೆ…

ಮೈಸೂರು,ಜ11,Tv10 ಕನ್ನಡ
ಜನವರಿ 15 ರಂದು ಬೆಳಿಗ್ಗೆ 8 ಗಂಟೆಯಿಂದ ಮೈಸೂರಿನ ಚಾಮುಂಡಿ ಬೆಟ್ಟದ ಬಳಿ ಇರುವ ರೇಸ್ ಕೋರ್ಸ್ ಮೈದಾನದಲ್ಲಿ ಯೋಗಥಾನ್ ನಡೆಯಲಿದೆ.80 ಸಾವಿರ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದ ಯಶಸ್ಸಿಗೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿ‌ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾಮತನಾಡಿದರು. ಜ 80 ಸಾವಿರ ಜನ ಭಾಗವಹಿಸುವಂತೆ ಗುರಿ ನಿಗದಿಯಾಗಿದ್ದು, www.yogathon2022.com ನಲ್ಲಿ ನೊಂದಣಿ ಮಾಡಿಕೊಂಡು ನೀಡಲಾಗುವ ಕ್ಯೂಆರ್ ಕೋಡ್ ನ್ನು ಸ್ಕ್ಯಾನ್ ಮಾಡಿಸಿ ಜನವರಿ 15 ರಂದು ಯೋಗಾಥಾನ್ ಗೆ ಪ್ರವೇಶಿಸುವ ವ್ಯವಸ್ಥೆ ಮಾಡಲಾಗಿದೆ.
ಶಾಲಾ, ಕಾಲೇಜು, ವಸತಿ ಶಾಲೆಗಳಿಂದ ನೊಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಕರೆದುಕೊಂಡು ‌ಬರುವ ವ್ಯವಸ್ಥೆ ಮಾಡಿ ಎಂದು ತಿಳಿಸಿದ್ದಾರೆ.
ಪಾರ್ಕಿಂಗ್, ಕುಡಿಯುವ ನೀರು, ಶೌಚಾಲಯ, ವೇದಿಕೆ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳಿಗೆ ಅಧಿಕಾರಿಗಳನ್ನು ನೇಮಕ ಮಾಡಿ ಜವಾಬ್ದಾರಿಗಳನ್ನು ವಹಿಸಿ, ಎಂಟ್ರಿ ಗೇಟ್ ಗಳ ವ್ಯವಸ್ಥೆ ಮಾಡುವಂತೆ ಸಲಹೆ ನೀಡಿದರು.ಶಿಷ್ಠಾಚಾರ, ಭದ್ರತೆ ಹಾಗೂ ಸಾರಿಗೆ ವ್ಯವಸ್ಥೆಯ ಬಗ್ಗೆ ಸೂಕ್ತ ಕ್ರಮವಹಿಸಿ ಯಾವುದೇ ಲೋಪವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮವಹಿಸಬೇಕು ಎಂದು ತಿಳಿಸಿದರು.
ವೇದಿಕೆ, ಸ್ವಚ್ಚತೆ , ಉಪಹಾರ ಹಾಗೂ ಆಂಬುಲೆನ್ಸ್ ವ್ಯವಸ್ಧೆ ಮಾಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸಮನ್ವಯದಿಂದ ಕೆಲಸ ನಿರ್ವಹಿಸಬೇಕು. ಆದಷ್ಟು ಚಿಕ್ಕ ಮಕ್ಕಳು ಯೋಗ ಕಾರ್ಯಕ್ರಮಕ್ಕೆ ಭಾಗವಹಿಸದಂತೆ ನೋಡಿಕೊಳ್ಳಿ ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆರ್ .ಲೋಕನಾಥ್ , ಯುವಜನ‌ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಜಿಲ್ಲಾ ಆಯುಷ್ ಅಧಿಕಾರಿ ಡಾ ಪುಷ್ಪ್ ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಹರೀಶ್ ಟಿ.ಕೆ. ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು…

Spread the love

Related post

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ…

ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ…ಆಟೋದಲ್ಲಿ ಬಂದ ಕಿಡಿಗೇಡಿಗಳ ಕೃತ್ಯ… ಮೈಸೂರು,ಸೆ10,Tv10 ಕನ್ನಡ ವೃದ್ದೆಯ ಚಿನ್ನದ ಸರ ಕಸಿಯಲು ವಿಫಲ ಯತ್ನ ನಡೆದಿದೆ.ಮೈಸೂರಿನ ಮೇಟಗಳ್ಳಿ ಪೊಲೀಸ್ ಠಾಣಾ…
ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ…

ಬೇಲಿ ಕಂಬಿಗೆ ಸಿಲುಕಿ ವ್ಯಕ್ತಿ ಸಾವು…ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವೇಳೆ ಘಟನೆ… ಮೈಸೂರು,ಸೆ6,Tv10 ಕನ್ನಡ ಕುಡಿದ ಮತ್ತಿನಲ್ಲಿ ಬೇಲಿ ಹಾರಿದ ವ್ಯಕ್ತಿಗೆ ಕಬ್ಬಿಣದ ರಾಡು ಚುಚ್ಚಿ ಸ್ಥಳದಲ್ಲೇ…
ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ…

ವ್ಯಕ್ತಿ ಅನುಮಾನಾಸ್ಪದ ಸಾವು…ನೇಣುಬಿಗಿದ ಸ್ಥಿತಿಯಲ್ಲಿ ಶವ ಪತ್ತೆ… ಮೈಸೂರು,ಸೆ6,Tv10 ಕನ್ನಡ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮೇಟಗಳ್ಳಿ ಸರ್ಕಾರಿ ಶಾಲೆ ಆವರಣದಲ್ಲಿ ನಡೆದಿದೆ.ನೇಣು ಬಿಗಿದ ಸ್ಥಿತಿಯಲ್ಲಿ ಶವ…

Leave a Reply

Your email address will not be published. Required fields are marked *