
ಭತ್ತ ಖರೀದಿ ಕೇಂದ್ರ ತೆರೆಯುವಂತೆ ರೈತರ ಪ್ರತಿಭಟನೆ…ರಸ್ತೆಗೆ ಭತ್ತ ಸುರಿದು ಆಕ್ರೋಷ…
- TV10 Kannada Exclusive
- January 18, 2023
- No Comment
- 176

ಭತ್ತ ಖರೀದಿ ಕೇಂದ್ರ ತೆರೆಯುವಂತೆ ರೈತರ ಪ್ರತಿಭಟನೆ…ರಸ್ತೆಗೆ ಭತ್ತ ಸುರಿದು ಆಕ್ರೋಷ…
ಬನ್ನೂರು,ಜ18,Tv10ಕನ್ನಡ
ಭತ್ತ ಖರೀದಿ ಕೇಂದ್ರ ತೆರೆಯುವಂತೆ ರೈತರು ಇಂದು ಬನ್ನೂರಿನಲ್ಲಿ ಪ್ರತಿಭಟನೆ ನಡೆಸಿದರು.ಕರ್ನಾಟಕ ರಾಜ್ಯ ರೈತ ಸಂಘ(ಮೂಲ ಸಂಘಟನೆ) ವತಿಯಿಂದ ಬನ್ನೂರಿನ ಸಂತೆಮಾಳದಲ್ಲಿ ಪ್ರತಿಭಟನೆ ನಡೆಸಿದರು.ರಸ್ತೆಗೆ ಭತ್ತ ಸುರಿದು ರಸ್ತೆ ತಡೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದರು.ರಾಜ್ಯದ ಯಾವುದೇ ಸ್ಥಳದಲ್ಲಿ ಇದುವರೆಗೆ ಭತ್ತ ಖರೀದಿ ಕೇಂದ್ರ ತೆರೆಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.ಇದೇ ವೇಳೆ ಪಂಪ್ ಸೆಟ್ ಗಳಿಗೆ ಕನಿಷ್ಟ 7 ಗಂಟೆ ಕಾಲ ವಿದ್ಯುತ್ ಪೂರೈಕೆ ಮಾಡುವಂತೆ ಒತ್ತಾಯಿಸಿದರು.ಸಂಘಟನೆಯ ರಾಜ್ಯಾಧ್ಯಕ್ಷ ಬನ್ನೂರು ನಾರಾಯಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.ಜಿಲ್ಲಾ ಭತ್ತ ಖರೀದಿ ಕೇಂದ್ರದ ಅಧಿಕಾರಿ ವಾಣಿ ರವರಿಗೆ ಮನವಿ ಪತ್ರ ಸಲ್ಲಿಸಿದರು…